ಸೋಮವಾರ, ಫೆಬ್ರವರಿ 20, 2017

ಮೂರ್ ನಿಯಮ ಕುರಿತು ನಾಲ್ಕು ಮಾತು...

ಟಿ. ಜಿ. ಶ್ರೀನಿಧಿ


ಕಂಪ್ಯೂಟರ್ ಅಷ್ಟೇ ಅಲ್ಲ, ಯಾವ ವಿದ್ಯುನ್ಮಾನ ಉಪಕರಣವನ್ನೇ ತೆಗೆದುಕೊಂಡರೂ ಅದರ ಮೆದುಳು-ಹೃದಯದ ಕೆಲಸವನ್ನೆಲ್ಲ ಮಾಡಲು ಕನಿಷ್ಠ ಒಂದಾದರೂ ಇಂಟಿಗ್ರೇಟೆಡ್ ಸರ್ಕ್ಯೂಟ್ (ಐಸಿ) ಇರುತ್ತದೆ; ಕಂಪ್ಯೂಟರಿನಲ್ಲಿ ಪ್ರಾಸೆಸರ್ ಇರುತ್ತದಲ್ಲ, ಹಾಗೆ. ಈ ಐಸಿಗಳಲ್ಲಿ ಬೇಕಾದಷ್ಟು ಟ್ರಾನ್ಸಿಸ್ಟರುಗಳಿರುತ್ತವೆ. ಸಾವಿರಗಳಷ್ಟೆ ಏಕೆ, ಲಕ್ಷಗಟ್ಟಲೆ ಟ್ರಾನ್ಸಿಸ್ಟರುಗಳು ಇಂತಹ ಐಸಿಗಳೊಳಗೆ ಅಡಕವಾಗಿರುತ್ತವೆ.
ಒಂದು ಐಸಿಯಲ್ಲಿ ಹೆಚ್ಚುಹೆಚ್ಚು ಟ್ರಾನ್ಸಿಸ್ಟರುಗಳನ್ನು ಸೇರಿಸುವುದು ಸಾಧ್ಯವಾದಷ್ಟೂ ಆ ಐಸಿ ಬಳಸುವ ಉಪಕರಣದ ಗಾತ್ರ ಚಿಕ್ಕದಾಗುತ್ತದೆ; ಅಷ್ಟೇ ಅಲ್ಲ, ಅದರ ಕಾರ್ಯಕ್ಷಮತೆ ಕೂಡ ಹೆಚ್ಚುತ್ತದೆ.

ಏಪ್ರಿಲ್ ೧೯೬೫ರ 'ಇಲೆಕ್ಟ್ರಾನಿಕ್ಸ್' ಪತ್ರಿಕೆಯಲ್ಲಿ ಪ್ರಕಟವಾದ ಲೇಖನವೊಂದರಲ್ಲಿ ಪ್ರತಿಯೊಂದು ಐಸಿಯಲ್ಲಿ ಅಡಕವಾಗುವ ಟ್ರಾನ್ಸಿಸ್ಟರುಗಳ ಸಂಖ್ಯೆಯ ಬಗೆಗೊಂದು ಹೇಳಿಕೆ ದಾಖಲಾಗಿತ್ತು. ಆ ಲೇಖನ ಬರೆದವರು ಇಂಟೆಲ್ ಸಂಸ್ಥೆಯ ಸ್ಥಾಪಕರಲ್ಲೊಬ್ಬರಾದ ಗಾರ್ಡನ್ ಮೂರ್. ಐಸಿಗಳಲ್ಲಿರುವ ಟ್ರಾನ್ಸಿಸ್ಟರುಗಳ ಸಂಖ್ಯೆ ಸರಿಸುಮಾರು ಎರಡು ವರ್ಷಗಳಿಗೊಮ್ಮೆಯಂತೆ ದ್ವಿಗುಣಗೊಳ್ಳುತ್ತದೆ ಎನ್ನುವ ಈ ಹೇಳಿಕೆಯೇ ಮುಂದೆ 'ಮೂರ್ ನಿಯಮ' (Moore's Law) ಎಂದು ವಿಖ್ಯಾತವಾಯಿತು. ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯ ವೇಗವನ್ನು ಅತ್ಯಂತ ಸಮರ್ಥವಾಗಿ ಅಂದಾಜಿಸಿದ್ದು ಈ ನಿಯಮದ ಹೆಚ್ಚುಗಾರಿಕೆ.
ಮೂರ್ ನಿಯಮದ ಕುರಿತು ಇನ್ನಷ್ಟು ಮಾಹಿತಿಗಾಗಿ ಈ ಲೇಖನವನ್ನೂ ಓದಿ!
ಏಪ್ರಿಲ್ ೨೫, ೨೦೧೬ರ ವಿಜಯವಾಣಿಯಲ್ಲಿ ಪ್ರಕಟವಾದ ಲೇಖನ

ಕಾಮೆಂಟ್‌ಗಳಿಲ್ಲ:

badge